ಮಂಗಳೂರಿನ ರೊಜಾರಿಯೊ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸುವುದರ ಮೂಲಕ ಹೊಸ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಭಗವಂತನ ಅನುಗ್ರಹವನ್ನು ಬೇಡುತ್ತಾ ಪ್ರಾರ್ಥನಾ ವಿಧಿಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಆಲಿಸ್ ಕೆ. ಜೆ ರವರು, ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಜಸಿಂತ ಮೊರಾಸ್, ಹಾಗೂ ಇಬ್ಬರು ವಿದ್ಯಾರ್ಥಿ ಪ್ರತಿನಿಧಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಆಲಿಸ್ ಕೆಜೆ ರವರು ಇಂದಿನ ಸಮಾಜದಲ್ಲಿ ವಿದ್ಯೆಯು ಬಹಳ ಅವಶ್ಯಕ. ವಿದ್ಯಾರ್ಜನೆಯಿಂದ ಉತ್ತಮ ಪ್ರತಿಭೆಗಳನ್ನು ಬೆಳೆಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಿ ಹೊಸತನ ಶಿಸ್ತು ವಿದ್ಯಾರ್ಥಿಗಳಲ್ಲಿ ಅಳವಡಿಸಿ, ಅನುಸರಿಸಬೇಕಾದ ಶಿಸ್ತು ಮತ್ತು ನಿಯಮಗಳ ಬಗ್ಗೆ ತಿಳಿಸಿ, ಹೊಸ ಶಿಕ್ಷಣ ವರ್ಷಕ್ಕೆ ಶುಭ ಕೋರಿದರು. ಶಾಲಾ ಶಿಕ್ಷಕಿ ಶ್ರೀಮತಿ ಲವೀನಾ ಕ್ವಾಡ್ರಸ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದ ಅರ್ಪಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ಸಿಹಿ ತಿಂಡಿಯನ್ನು ವಿತರಿಸಲಾಯಿತು.